ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 98.68 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಾಣೆ

ಮಂಗಳೂರು:ಜ,9. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು98.68 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಜನವರಿ 8ರಂದು ಏರ್​ ಇಂಡಿಯಾ ಎಕ್ಸ್‌ಪ್ರೆಸ್​ ಫ್ಲೈಟ್​​​​ IX 816 ಮೂಲಕ ಅಬುಧಾಬಿಯಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ.

ಪ್ರಯಾಣಿಕನ ಅನುಮಾನಾಸ್ಪದ ಚಲನವಲನದ ಆಧಾರದ ಮೇಲೆ, ಕಸ್ಟಮ್ಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ, ಈ ವೇಳೆ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟು ಪೇಸ್ಟ್ ರೂಪದಲ್ಲಿ 5 ಅಂಡಾಕಾರದ ವಸ್ತುಗಳಲ್ಲಿ ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.

24 ಕ್ಯಾರೆಟ್ ನ 1,579 ಗ್ರಾಂ ಚಿನ್ನ ಪತ್ತೆಯಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ. 98,68,750 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

No Comments

Leave A Comment