ಉಡುಪಿ ಪರ್ಯಾಯ; ಪುತ್ತಿಗೆ ಶ್ರೀಗಳಿಂದ ಉಡುಪಿ ಆದರ್ಶ ಆಸ್ಪತ್ರೆಗೆ ಭೇಟಿ
ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಉಡುಪಿಯ ಆದರ್ಶ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಜಿ. ಎಸ್ ಚಂದ್ರ ಶೇಖರ್ ಹಾಗೂ ವಿಮಲಾ ಜಿ. ಎಸ್ ಅವರು ಶ್ರೀಪಾದರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ಆ ಬಳಿಕ ಪುತ್ತಿಗೆ ಶ್ರೀಪಾದರಿಗೆ ಪಾದಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳು ಎಲ್ಲರಿಗೂ ಪರ್ಯಾಯ ಮಹೋತ್ಸವಕ್ಕೆ ಆಹ್ವಾನಿಸಿದರು. ಆಹಾರತಜ್ಞೆ ಅನುಶ್ರೀ ಅವರು ಸ್ವಾಮೀಜಿಯ ಕಿರು ಪರಿಚಯ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಆದರ್ಶ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.