Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಚೀನಾದ ಕಲ್ಲಿದ್ದಲ್ಲು ಗಣಿಯಲ್ಲಿ ಸ್ಘೋಟ- 8 ಮಂದಿ ಸಾವು

ಹೆನಾನ್:ಜ, 13. ಚೀನಾದ ಹೆನಾನ್ ಪ್ರಾಂತ್ಯದ ಪಿಂಗ್ಡಿಂಗ್ಶಾನ್ ನಗರದ ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಅನಿಲ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 8 ಜನರು ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಪಿಂ ಗ್ಡಿಂ ಗ್ಶಾನ್ ಟಿಯಾನನ್ ಕಲ್ಲಿದ್ದಲು ಗಣಿ ಕಂಪನಿ, ಲಿಮಿಟೆಡ್ ಗಣಿಯಲ್ಲಿ ನಿನ್ನೆ ಮಧ್ಯಾಹ್ನ 2:55ಕ್ಕೆ ಘಟನೆ ನಡೆದಿದೆ. ಈ ವೇಳೆ ಒಟ್ಟು 425 ಜನರು ಇದ್ದರು. ಅವರಲ್ಲಿ 380 ಮಂದಿಯನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಉಳಿದ 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತುರ್ತು ನಿರ್ವಹಣಾ ಏಜೆನ್ಸಿಯನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.

ಬಳಿಕ ತಡರಾತ್ರಿ 1 ಗಂಟೆಗೆ ನಾಪತ್ತೆಯಾದ 45 ಕಾರ್ಮಿಕರಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರ್ಯಚರಣೆ ಮುಂದುವರಿದಿದೆ.

No Comments

Leave A Comment