Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪ್ರಚೋದನಾಕರಿ ಹೇಳಿಕೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್ ದಾಖಲು

ಕಾರವಾರ: (ಜನವರಿ 14): ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ(ananth kumar hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡುತ್ತೇವೆ. ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಪ್ರಚೋದನಾಕರಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಇದೀಗ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಸುವೋಟೊ ಕೇಸ್ ದಾಖಲಾಗಿದೆ.

ಬಾಬರಿ ಮಸೀದಿಯಂತೆ ದೇವಸ್ಥಾನಗಳ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವುದಾಗಿ ಹೇಳಿದ್ದರು. ಅಲ್ಲದೇ ಸಿಎಂ ಸಿದ್ಧಾರಾಮಯ್ಯ ವಿರುದ್ಧ ಏಕವಚನ ಟೀಕೆ ಮಾಡಿದ್ದರು. ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಕುಮಟಾ ಪೊಲೀಸರು ದ್ವೇಷ ಭಾಷಣ ಹಾಗೂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಯತ್ನ ಮಾಡಿರುವುದಾಗಿ ಸೆಕ್ಷನ್ 505 ಹಾಗೂ 153 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅನಂತಕುಮಾರ್ ಹೆಗಡೆ ಹೇಳಿದ್ದೇನು?
ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡ್ತೇವೆ, ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪ್ರಚೋದನಾಕರಿ ಹೇಳಿಕೆ ನೀಡಿದ್ದರು.

ಇಷ್ಟೇ ಅಲ್ಲ ರಾಮ ಮಂದಿರ ನಿಲ್ಲಲ್ಲ ಮಗನೇ ಎಂದು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಟೀಕಿಸಿದ್ದರು. ಇನ್ನು ಇಂದಿರಾ ಗಾಂಧಿ ಕುಟುಂಬಕ್ಕೆ ಗೋಪಾಷ್ಠಮಿ ಶಾಪ ಇದೆ. ಅದೇ ಶಾಪದಿಂದ್ಲೇ ಇಂದಿರಾ, ಸಂಜಯ್ ಗಾಂಧಿ, ರಾಜೀವ್ ಗಾಂಧಿ ಮೃತಪಟ್ಟಿದ್ದು ಎಂದು ಸ್ಫೋಟಕ ಹೇಳಿಕೆ ನೀಡಿದ್ದರು.

No Comments

Leave A Comment