ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕಿಶೋರ್ ಕುಮಾರ್ ಆಯ್ಕೆ

ಉಡುಪಿ: ಜ 15, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೊರಡಿಸಿರುವ ಆದೇಶದಲ್ಲಿ ಕಿಶೋರ್ ಕುಮಾರ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿಯ ನೇತೃತ್ವದ ಹೊಸ ಜವಾಬ್ದಾರಿ ನೀಡಲಾಗಿದೆ.

ಈ ಹಿಂದೆ ಕುಂದಾಪುರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಸ್ಪರ್ಧಿಸಿದ್ದರು.ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.

kiniudupi@rediffmail.com

No Comments

Leave A Comment