ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಓಮಿನಿ ಕಾರು ಹಾಗೂ ಟ್ರ್ಯಾಕ್ಟರ್‌ ನಡುವೆ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಮೃತ್ಯು!

ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80 ಎಂದು ಗುರುತಿಸಲಾಗಿದೆ.

ಗಾಯಾಳುಗಳು ಚನ್ನಗಿರಿ ತಾಲೂಕಿನ‌ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಸ್ಥಳದಲ್ಲೇ ‌ಮೂವರು ಸಾವನ್ನಪ್ಪಿದ್ದು. ಗಾಯಾಳುಗಳಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚನ್ನಗಿರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment