
ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.
ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಇದನ್ನು ಓದಿ: SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿದೆ.