ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಅಯೋಧ್ಯೆ ರಾಮಮಂದಿರ : 500 ವರ್ಷಗಳ ಕಾಯುವಿಕೆ ಅಂತ್ಯ; ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ
ಅಯೋಧ್ಯೆ: ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ.
ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ (Ram Mandir) ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ (Ram Lalla) ಪ್ರಾಣಪ್ರತಿಷ್ಠಾಪನೆ ) ನೆರವೇರಿಸಲಾಗಿದೆ. ಇದರೊಂದಿಗೆ ರಾಮಮಂದಿರವು ಉದ್ಘಾಟನೆಯಾದಂತಾಗಿದೆ.
ಜನಗಳ ಮನದಲ್ಲಿ ಅಧಿನಾಯಕ ಶ್ರೀ ರಾಘವ ನೆಲೆಯೂರುವ ಶತಮಾನಗಳ ಕನಸು ಇಂದು ನೆರವೇರಿದೆ. ಪ್ರಧಾನಿ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ, ಯಜಮಾನನ ಸ್ಥಾನದಲ್ಲಿ ನಿಂತು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಸಂಪನ್ನಗೊಳಿಸಿದ್ದಾರೆ. ಇದರೊಂದಿಗೆ, ಇಂದಿನಿಂದ ಮುದ್ದು ಮುಖದ ಬಾಲಕ ರೂಪದಲ್ಲಿ ಶ್ರೀರಾಮ ಭಕ್ತರ ದರ್ಶನಕ್ಕೆ ಮುಕ್ತನಾಗಲಿದ್ದಾನೆ.
ಇನ್ನು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭ ಸಂಪನ್ನಗೊಂಡ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು “ಅಯೋಧ್ಯಾ ಧಾಮದಲ್ಲಿ ಶ್ರೀ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠೆಯ ದಿವ್ಯ ಕ್ಷಣವು ಪ್ರತಿಯೊಬ್ಬರಿಗೂ ಭಾವನಾತ್ಮಕ ಕ್ಷಣವಾಗಿದೆ. ಈ ವಿಶಿಷ್ಟ ಕಾರ್ಯಕ್ರಮದ ಭಾಗವಾಗಿರುವುದು ನನ್ನ ಅದೃಷ್ಟ. ಜಯ್ ಸಿಯಾ ರಾಮ್!” ಎಂದು ತಿಳಿಸಿದ್ದಾರೆ.
ಪ್ರಾಣ ಪ್ರತಿಷ್ಠಾ ಸಮಾರಂಭದ ಕಾರ್ಯಕ್ರಮದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಡುಪಿಯ ಪೇಜಾವರ ಶ್ರೀ ಉಪಸ್ಥಿತರಿದ್ದರು.