Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟ

WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಸೇರಿದಂತೆ ದ್ವಿತೀಯ ಹಂತದ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು  ಫೆಬ್ರವರಿ 24 ರಿಂದ WPL ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.

WPL 2024 ಸಂಪೂರ್ಣ ವೇಳಾಪಟ್ಟಿ:
 1. ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)

 2. ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)

 3. ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)

 4. ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)

 5. ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)

 6. ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)

 7. ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)

 8. ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)

 9. ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)

 10. ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)

 11. ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)

 12. ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)

 13. ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)

 14. ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)

 15. ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)

 16. ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)

 17. ಮಾರ್ಚ್ 10 –  ಡೆಲ್ಲಿ ಕ್ಯಾಪಿಟಲ್ಸ್ vs  ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)

 18. ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)

 19. ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)

 20. ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)

 21. ಮಾರ್ಚ್ 15 – ಎಲಿಮಿನೇಟರ್ (ದೆಹಲಿ)

 22. ಮಾರ್ಚ್ 17 – ಫೈನಲ್ (ದೆಹಲಿ)

No Comments

Leave A Comment