Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಕಲಬುರಗಿಯಲ್ಲಿ ಭುಗಿಲೆದ್ದ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ

ಕಲಬುರಗಿ: ನಗರಕ್ಕೆ ಹೊಂದಿಕೊಂಡಿರುವ ಕೋಟ್ನೂರು (ಡಿ) ಗ್ರಾಮದ ಬಳಿ ಅಂಬೇಡ್ಕರ್ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಅಪಮಾನ ಮಾಡಿದ್ದು, ಇದಕ್ಕೆ ದಲಿಕ ಮುಖಂಡರು ಸಿಡಿದೆದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪ್ರತಿಭಟನೆಯು ಶಾಂತಿಯುತವಾಗಿ ಪ್ರಾರಂಭವಾದರೂ, ಮಧ್ಯಾಹ್ನದ ವೇಳೆಗೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಹುಮ್ನಾಬಾದ್ ಬೇಸ್ ಮತ್ತು ಸೂಪರ್ ಮಾರ್ಕೆಟ್ ಪ್ರದೇಶಗಳಲ್ಲಿ ಅಂಗಡಿಗಳು, ಹೋಟೆಲ್‌ಗಳು ಮತ್ತು ಇತರೆ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದರು.

ರಾಮಮಂದಿರ ವೃತ್ತದ ಬಳಿ ಬೆಳಗ್ಗೆಯೇ ದಲಿತ ಮುಖಂಡರು ರಾಜ್ಯ ಹೆದ್ದಾರಿ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಉಪ ಪೊಲೀಸ್ ಆಯುಕ್ತೆ ಕನಿಕಾ ಸುಕ್ರಿವಾಲ್ಅವರು  ಸ್ಥಳಕ್ಕೆ ಧಾವಿಸಿ, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು, ಆದರೆ, ಈ ಪ್ರಯತ್ನ ವಿಫಲವಾಯಿತು.

ನಂತರ ಪ್ರತಿಭಟನಾಕಾರರು ಡಿಸಿಪಿಯವರೇ ಪ್ರತಿಮೆಯನ್ನು ಸ್ವಚ್ಛಗೊಳಿಸಿಸ ಮಾಲಾರ್ಪಣೆ ಮಾಡುವಂತೆ ಮಾಡಿದರು.

ಅಂಬೇಡ್ಕರ್ ಪ್ರತಿಮೆ ಸುತ್ತಲೂ ಅಪಾರ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರಿಂದ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಸುಮಾರು ಅರ್ಧ ಕಿಲೋಮೀಟರ್ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಕೂಡ ಎದುರಾಗಿತ್ತು.

ಜಿಲ್ಲಾಧಿಕಾರಿಗಳು ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿಕೊಂಡರು. ಆದರೆ, ಕಿಡಿಗೇಡಿಗಳ ಬಂಧನದ ನಂತರವೇ ಪ್ರತಿಭಟನೆ ಕೈಬಿಡುವುದಾಗಿ ಪಟ್ಟು ಹಿಡಿದರು.

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಅಧಿಕಾರಿಗಳು ಮಧ್ಯಾಹ್ನದ ವೇಳೆಗೆ, ಹೆಚ್ಚಿನ ರಸ್ತೆಗಳ ಮೇಲೆ ನಿರ್ಬಂಧ ಹೇರಿದರು. ನಂತರ ಪ್ರತಿಭಟನಾಕಾರರು ಹೋಟೆಲ್ ಸೇರಿದಂತೆ ಇತರೆ ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲು ಆರಂಭಿಸಿದರು. ನಂತರ ಅಂಗಡಿಗಳನ್ನು ಬಂದ್ ಮಾಡುವಂತೆ ವ್ಯಾಪಾಸ್ಥರಿಗೆ ಆಗ್ರಹಿಸಿದರು.

ಘಟನೆಯನ್ನು  ಜೇವರ್ಗಿ ಶಾಸಕರೂ ಆದ ಕಲ್ಯಾಣ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಅಜಯಸಿಂಗ್ ಅವರು ಖಂಡಿಸಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಡಾ.ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು.

ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರಯ ಸಿ ಪಾಟೀಲ್ ರೇವೂರ್ ಕೂಡ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ವಿಡಿಯೋ ಬಿಡುಗಡೆ ಮಾಡಿ ಹಿಂಸಾಚಾರ ನಡೆಸದಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ.

No Comments

Leave A Comment