ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ, 7 ಎಎಪಿ ಶಾಸಕರಿಗೆ 25 ಕೋಟಿ ರೂ. ಆಮಿಷ: ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪ
ನವದೆಹಲಿ: ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಯತ್ನ ನಡೆಸುತ್ತಿದ್ದು, ನಮ್ಮ ಪಕ್ಷದ 7 ಮಂದಿ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ಇತ್ತೀಚೆಗೆ ನಮ್ಮ ದೆಹಲಿಯ ಏಳು ಶಾಸಕರನ್ನು ಬಿಜೆಪಿಗರು ಸಂಪರ್ಕಿಸಿ, ಕೆಲವು ದಿನಗಳ ಬಳಿಕ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ನಂತರ ನಿಮ್ಮ ಶಾಸಕರನ್ನು ಒಡೆಯುತ್ತೇವೆ. 21 ಶಾಸಕರೊಂದಿಗೆ ಮಾತುಕತೆಯೂ ಸಹ ನಡೆಸಲಾಗಿದೆ. ಇತರರೊಂದಿಗೂ ಮಾತನಾಡುತ್ತೇವೆ. ಆದಾದ ಮೇಲೆ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸುತ್ತೇವೆ. ನೀವೂ ಕೂಡ ಬರಬಹುದು. 25 ಕೋಟಿ ರೂ. ನೀಡುತ್ತೇವೆ, ಬಿಜೆಪಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದು ಹೇಳಿದ್ದಾರೆ.
ಅವರ ಪ್ರಕಾರ, ನಾವು 21 ಶಾಸಕರನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದ್ದಾರೆ. ಆದರೆ, ನಮ್ಮ ಮಾಹಿತಿಯ ಪ್ರಕಾರ ಕೇವಲ 7 ಶಾಸಕರನ್ನು ಮಾತ್ರ ಸಂಪರ್ಕಿಸಲಾಗಿದ್ದು, ಅವರೆಲ್ಲರೂ ನಿರಾಕರಿಸಿದ್ದಾರೆ” ಎಂದು ಎಂದು ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ.
ಕಳೆದ 9 ವರ್ಷಗಳಿಂದ ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನಗಳು ನಡೆಯುತ್ತಲೇ ಇದೆ. ಅಬಕಾರಿ ಅಕ್ರಮ ಹಗರಣದಲ್ಲಿ ಸಿಲುಕಿಸಿ ಬಂಧಿಸಲು ಯತ್ನ ನಡೆಸಲಾಗಿತ್ತು. ಆಜಕೆ. ಆ ಪ್ರಯತ್ನ ವಿಫಲವಾಯಿತು. ದೇವರು ಮತ್ತು ಜನತೆ ಎಂದಿಗೂ ನಮ್ಮೊಂದಿಗಿದ್ದಾರೆ. ಹೀಗಾಗಿ ಅವರ ಇದುವರೆಗಿನ ಪ್ರಯತ್ನ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿ ಜನತೆ ಆಮ್ ಆದ್ಮಿ ಪಕ್ಷದ ಮೇಲೆ ಅಪಾರ ವಿಶ್ವಾಸ ಮತ್ತು ಪ್ರೀತಿ ಹೊಂದಿದೆ. ದೆಹಲಿಯ ಒಳಿತಿಗಾಗಿ ಬಿಜೆಪಿ ಏನೂ ಮಾಡಿಲ್ಲ. ಹೀಗಾಗಿ ಬಿಜೆಪಿಯವರ ನಾಟಕವೆಲ್ಲಾ ಜನರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಆದರೆ, ಕೇಜ್ರಿವಾಲ್ ಅವರ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ಶಾಸಕರು ಹಾಗೂ ಆಮಿಷವೊಡ್ಡಿದ ನಾಯಕರ ಹೆಸರನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದೆ.
ಈ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ದೆಹಲಿ ಸಚಿವೆ ಅತಿಶಿ ಅವರು, ದೆಹಲಿಯಲ್ಲಿ ಬಿಜೆಪಿ ‘ಆಪರೇಷನ್ ಕಮಲ 2.0’ ಆರಂಭಿಸಿದೆ. ಕಳೆದ ವರ್ಷ ಎಎಪಿ ಶಾಸಕರಿಗೆ ಹಣ ನೀಡುವ ಮೂಲಕ ಆಮಿಷವೊಡ್ಡಲಾಗಿತ್ತು. ಈ ಪ್ರಯತ್ನ ವಿಫಲವಾಗಿತ್ತು ಎಂದು ಹೇಳಿದ್ದಾರೆ.
ಈ ಆರೋಪವನ್ನು ತಳ್ಳಿಹಾಕಿದ ದೆಹಲಿ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ, ಆಮಿಷವೊಡ್ಡಿದ ವ್ಯಕ್ತಿಯ ಹೆಸರನ್ನು ಬಹಿರಂಗಪಡಿಸುವಂತೆ ಸವಾಲು ಹಾಕಿದ್ದಾರೆ. ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗಬೇಕಿದ್ದು, ಈ ವಿಚಾರದಲ್ಲಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.