Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ಸಂಜೆ ಬಿಜೆಪಿ ಜೊತೆಗೆ ಹೊಸ ಸರ್ಕಾರ ರಚನೆ ಸಾಧ್ಯತೆ!

ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಎರಡ್ಮೂರು ದಿನಗಳಿಂದ ಬಿಹಾರ ರಾಜಕಾರಣದಲ್ಲಿ ಎದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದು, ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ.

ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ ಸಚಿವ ಬಿಜೇಂದ್ರ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿರುವುದಾಗಿ ತಿಳಿಸಿದರು. ಮಹಾಘಟಬಂಧನ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂದಿದೆ. ಎಲ್ಲರಿಂದ ಅಭಿಪ್ರಾಯ ತಿಳಿದುಕೊಂಡು ಇಂದು ಸರ್ಕಾರ ವಿಸರ್ಜನೆಯಾಗಿದೆ ಎಂದರು.

ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಪಟ್ನಾದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಕೇಂದ್ರ ಸಚಿವ ನಿತ್ಯಾನಂದ ರಾಯ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ಸಂಸದ ರವಿಶಂಕರ್ ಪ್ರಸಾದ್ ಸಭೆಗೆ ಆಗಮಿಸಿದ್ದಾರೆ.

ಇಂದು ಸಂಜೆ ಬಿಜೆಪಿಯೊಂದಿಗೆ ಸೇರಿ ನಿತೀಶ್ ಕುಮಾರ್ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

No Comments

Leave A Comment