Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ-

ಚೆನ್ನೈ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಪುಲಿಯಂಗುಡಿದ  ಐವರು ನಿವಾಸಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಚೊಕ್ಕಂಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರೆಲ್ಲರೂ  ಪುಲಿಯಂಗುಡಿಯ ಭಗವತಿ ಅಮ್ಮನ್ ದೇವಾಲಯ ಪ್ರದೇಶದವರಾಗಿದ್ದು, ಜನವರಿ 27 ರಂದು ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು ಎನ್ನಲಾಗಿದೆ.

ಉತ್ಸವದಲ್ಲಿ ಪಾಲ್ಗೊಂಡ ನಂತರ ಕುಟ್ರಾಲಂ ಜಲಪಾತ ವೀಕ್ಷಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ನಿದ್ರೆಯ ಮಂಪರಿನಲ್ಲಿದ್ದ ಕಾರು ಚಾಲಕ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿಯಡಿ ಸಿಲುಕಿದ ಕಾರು ಕೆಲ ಅಡಿಗಳವರೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

No Comments

Leave A Comment