ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿ೦ದ ಮಾ.ಸಮರ್ಥ ಭಟ್ ಕಲಾ ಕ್ಷೇತ್ರದಲ್ಲಿ,(ಕ್ಲೇ ಆರ್ಟ್ಸ್)ಗೆ “ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿ”ಪ್ರದಾನ
ಉಡುಪಿ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ 2023-24 ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡುವ ಹೊಯ್ಸಳ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಉಡುಪಿ ಕಲ್ಯಾಣಪುರ ನಿವಾಸಿ ಸಂದೇಶ್ ಭಟ್ ಹಾಗೂ ಶ್ರೀಮತಿ ಸಂಜನಾ ಭಟ್ ಇವರ ಸುಪುತ್ರ, ಮಣಿಪಾಲ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿ ಮಾ.ಸಮರ್ಥ ಭಟ್ ಆಯ್ಕೆಯಾಗಿದ್ದು, ದಿನಾಂಕ 26.01.2024 ರಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾ.ಸಮರ್ಥ ಭಟ್ ಕಲಾ ಕ್ಷೇತ್ರದಲ್ಲಿ,(ಕ್ಲೇ ಆರ್ಟ್ಸ್) ಮಾಡಿರುವ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಉಡುಪಿ ವಿಧಾನಸಭಾ ಸದಸ್ಯರಾದ ಯಶ್ಪಾಲ್ ಸುವರ್ಣ ಸೇರಿದಂತೆ ಇತರ ಪ್ರಮುಖರು ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.