ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.

ಡಿಕೆ ಸುರೇಶ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಗೋಯಲ್ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದರು. ಜೊತೆಗೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸದನದಲ್ಲಿಯೇ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಪಕ್ಷದ ಸಂಸದರು ನೀಡಿರುವ ಹೇಳಿಕೆಯನ್ನು ಖಂಡಿತಾ ಒಪ್ಪುವುದಿಲ್ಲ ಎಂದಿದ್ದಾರೆ.

ಇಂದು ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ. ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಖರ್ಗೆ ಹೇಳಿದರು.

ಡಿ ಕೆ ಸುರೇಶ್ ನಿನ್ನೆ ಏನು ಹೇಳಿದ್ದರು?: ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಡಿಕೆ ಸುರೇಶ್, ಈ ಬಾರಿಯ ಕೇಂದ್ರ ಬಜೆಟ್​​​ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವು ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು.

No Comments

Leave A Comment