ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಬಿಜೆಪಿ ಶಾಸಕ-ಶಿವಸೇನಾ ಶಿಂಧೆ ಬಣದ ನಡುವೆ ಘರ್ಷಣೆ: ಪೊಲೀಸ್ ಠಾಣೆಯಲ್ಲೇ ಗುಂಡಿನ ದಾಳಿ, ಮಹೇಶ್ ಗಾಯಕ್ವಾಡ್ ಸ್ಥಿತಿ ಗಂಭೀರ
ಥಾಣೆ (ಮಹಾರಾಷ್ಟ್ರ): ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಬೆಂಬಲಿಗರು ಶಿವಸೇನಾ (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮಹೇಶ್ ಗಾಯಕ್ವಾಡ್ ಮತ್ತು ಅವರ ಬೆಂಬಲಿಗನೊಬ್ಬನಿಗೆ ಐದು ಗುಂಡುಗಳು ತಗುಲಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿ ನಡೆದ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರುವ ತನಕ ಹೋಗಿತ್ತು. ಅದರಂತೆ ಇಬ್ಬರು ರಾಜಕಾರಣಿಗಳು ಪರಸ್ಪರ ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇಬ್ಬರು ರಾಜಕಾರಣಿಗಳ ಬೆಂಬಲಿಗರೂ ಕೂಡ ಅಲ್ಲಿ ಸೇರಿದ್ದರು.
ಈ ನಡುವೆ ಎರಡು ಕಡೆಯವರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಗಣೇಶ್ ಗಾಯಕ್ವಾಡ್ ಅವರು ಮಹೇಶ್ ಗಾಯಕ್ವಾಡ್ ಮೇಲೆ ನಾಲ್ಕು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡ ಇಬ್ಬರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗುಂಡು ಹಾರಿಸಿದ ಗಣಪತ್ ಗಾಯಕ್ವಾಡ್ ಅವರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಅವರು ಬಳಸಿದ ಗನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡ ಮಹೇಶ್ ಗಾಯಕ್ವಾಡ್ ಅವರನ್ನು ಮೊದಲು ಉಲ್ಲಾಸನಗರದ ಮೀರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ರಾತ್ರಿ 11 ಗಂಟೆಗೆ ಥಾಣೆಯ ಜುಪಿಟರ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸದ್ಯ ಜುಪಿಟರ್ ಆಸ್ಪತ್ರೆಯಲ್ಲಿ ಶಿವಸೇನೆ ನಾಯಕನ ಬೆಂಬಲಿಗರು ಜಮಾಯಿಸಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಆಸ್ಪತ್ರೆ ಸುತ್ತ ಹೆಚ್ಚಿನ ಪೊಲೀಸ್ ಸಿಬಂದಿಗಳನ್ನು ನಿಯೋಜನೆಗೊಳಿಸಲಾಗಿದೆ.