Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ

ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

“ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಿ” ಎಂದು ಪುರೋಹಿತ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಪುರೋಹಿತ್ ಅವರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯು ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳನ್ನು ಉಳಿಸಿಕೊಂಡ ಕೆಲವೇ ದಿನಗಳ ನಂತರ ಪರೋಹಿತ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ಮೇಯರ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ಗಳನ್ನು ಟ್ಯಾಂಪರಿಂಗ್ ಮಾಡಿದ್ದಾರೆ ಎಂದು ಕಾಂಗ್ರೆಸ್-ಎಎಪಿ ಮೈತ್ರಿ ಆರೋಪಿಸಿತ್ತು.

No Comments

Leave A Comment