Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಗಳೂರು: 42 ಅಕ್ರಮ ಸಿಮ್‌ಗಳೊಂದಿಗೆ ನಿಗೂಢ ಕೆಲಸಕ್ಕೆ ಬೆಂಗಳೂರಿಗೆ ಹೊರಟಿದ್ದ ಐವರು ಯುವಕರು ಅರೆಸ್ಟ್‌

ಮಂಗಳೂರು:ಫೆ 04.ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಅನುಮಾನಾಸ್ಪ ನಡೆ ಬಗ್ಗೆ ಖಚಿತ ಮಾಹಿತಿ ಪಡೆದ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ದಂಧೆ ಬಗ್ಗೆ ಬೆಳಕಿಗೆ ಬಂದಿದೆ.ಬಂಧಿತ ಆರೋಪಿಗಳಾದ ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಗುರುತಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ.

ಐದು ಮಂದಿ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಫೆ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಆರೋಪಿ ಅಕ್ಬರ್‌ ಅಲ್ಲಿ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ನೀಡಿ ಸಿಮ್‌ ಖರೀದಿ ಮಾಡಿದ್ದ. ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ.

ಅಕ್ಬರ್ ಆಲಿ ಮೊದಲಿನಿಂದಲೂ ದುಬೈನಲ್ಲಿ ಇದ್ದುಕೊಂಡೇ ಸಿಮ್ ಕಾರ್ಡ್ ಸಂಗ್ರಹಿಸುತ್ತಿದ್ದನು. ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನ ಮೂಲಕ ಸಿಮ್​ಗಳನ್ನು ಸಂಗ್ರಹ ಮಾಡುತ್ತಿದ್ದನು.ಮೊಹಮ್ಮದ್ ಮುಸ್ತಫಾ ತನ್ನ ಸ್ನೇಹಿತರಾಗಿರುವ ರಮೀಝ್ ಮತ್ತು ಮಹಮ್ಮದ್ ಸಾಧಿಕ್​ಗೆ ಸಿಮ್​ಗಳ ವ್ಯವಸ್ಥೆಗೆ ಸೂಚನೆ ನೀಡುತ್ತಿದ್ದನು. ಎಷ್ಟು ಸಿಮ್ ಕಾರ್ಡ್ ಬೇಕು ಅಷ್ಟುನ್ನು ತಮ್ಮ ಅತ್ಮಿಯರಿಂದ ಕಮಿಷನ್ ಕೊಡಿಸಿ ಸಂಗ್ರಹ ಮಾಡಿ ಮುಸ್ತಫಾನಿಗೆ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್ ಮಹಮ್ಮದ್ ಮುಸ್ತಫಾ ಪಡೆದುಕೊಂಡು ಬೆಂಗಳೂರು ವ್ಯಕ್ತಿಗಳಿಗೆ ಖಾಸಗಿ ಬಸ್ ಮೂಲಕ ಕಳುಹಿಸುವ ಕೆಲಸ ಮಾಡುತ್ತಿದ್ದ ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ತಿಳಿದು ಬಂದಿದೆ.ವಿದೇಶದ ನಂಟು ಇರುವುದರಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment