ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕೆಎಸ್​ಆರ್​ಟಿಸಿಯ 100 ಹೊಸ ಅಶ್ವಮೇಧ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್)ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

ಈ ಅಶ್ವಮೇಧ ಬಸ್ಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದ್ದು, ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿವೆ. ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳಿಗೆ ಚಾಲನೆ ನೀಡಲಾಗಿದೆ.

​ಈ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 52 ಸೀಟಿನ ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

No Comments

Leave A Comment