ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸುಳ್ಯ: ಹಾಡುಹಗಲೇ ಮನೆಗೆ ನುಗ್ಗಿ ಕಳ್ಳತನ; ಶ್ವಾನದಳ,ಬೆರಳಚ್ಚು ತಜ್ಞರಿಂದ ಸ್ಥಳ ಪರಿಶೀಲನೆ
ಸುಳ್ಯ,:ಫೆ 09. ಯಾರೂ ಇಲ್ಲದ ಸಂದರ್ಭ ಬಳಸಿ, ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಸಂಪಾಜೆಯ ಬೈಲಿನಲ್ಲಿ ಫೆ.08 ರಂದು ನಡೆದಿದೆ.
ಸಂಪಾಜೆ ಬೈಲಿನ ಕನ್ಯಾನ ವಿಜಯ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಅವರು ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ಮತ್ತು 20ಸಾವಿರ ಮೌಲ್ಯದ ಹಣ , ಉಂಗುರ ಕಳ್ಳತನವಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸ್ ಸಿಬ್ಬಂದಿ , ಬೆರಳಚ್ಚು ತಜ್ಞರು , ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಾಗಿದೆ.