Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ED raid- ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ದಾಳಿ: ದಾಖಲೆಗಳ ವಶ

ಬಳ್ಳಾರಿ: ರಾಜ್ಯದಲ್ಲಿ ತನಿಖಾ ಸಂಸ್ಥೆಯಿಂದ ದಾಳಿ ಮುಂದುವರಿದಿದೆ. ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (MLA Nara Bharath Reddy) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ.

ಶಾಸಕರ ಬೆಂಗಳೂರು ಹಾಗೂ ಚೆನ್ನೈನ ಕಚೇರಿಗಳ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ. ಶಾಸಕ ಭರತ್‌ ರೆಡ್ಡಿ ಅವರ ಕುಟುಂಬ ಗ್ರಾನೈಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಆಂಧ್ರ ಪ್ರದೇಶದ ಒಂಗೋಲ್‌ಗಳಲ್ಲಿ ಕ್ವಾರಿಗಳನ್ನು ಹೊಂದಿದೆ.ಇಡಿ ಅಧಿಕಾರಿಗಳ ತಂಡ ಬೆಂಗಳೂರಿನಿಂದ ಆಗಮಿಸಿದ್ದು, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾ ಭರತ ರೆಡ್ಡಿ ಮನೆ, ಅವರ ತಂದೆಯ ಕಚೇರಿ, ಅವರ ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

No Comments

Leave A Comment