ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

. ಇಂಗ್ಲೆಂಡ್ ವಿರುದ್ದ ಅಂತಿಮ 3 ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ: ಕೊಹ್ಲಿ ಸರಣಿಯಿಂದಲೇ ಔಟ್, ರಾಹುಲ್​, ಜಡೇಜಾಗೆ ಸ್ಥಾನ

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ.

ಇಂಗ್ಲೆಂಡ್​(IND vs ENG) ವಿರುದ್ಧದ ಬಾಕಿ ಉಳಿದಿರುವ ಮೂರು ಟೆಸ್ಟ್ ಪಂದ್ಯಗಳಿಗೆ ಕೊನೆಗೂ ಭಾರತ ತಂಡ ಪ್ರಕಟಗೊಂಡಿದ್ದು, ಶನಿವಾರ ಬಿಸಿಸಿಐ ಈ ತಂಡವನ್ನು ಪ್ರಕಟಿಸಿದೆ. ವಿರಾಟ್​ ಕೊಹ್ಲಿ ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದು, ಕೊಹ್ಲಿ ಅಲಭ್ಯವನ್ನು ಬಿಸಿಸಿಐ ಖಚಿತಪಡಿಸಿದೆ. ವೈಯಕ್ತಿಕ ಕಾರಣ ನೀಡಿ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್​ ಕೊಹ್ಲಿ ಅವರು ಉಳಿದ ಮೂರು ಟೆಸ್ಟ್​ ಪಂದ್ಯಗಳಿಂದಲೂ ಹೊರಗುಳಿಯಲಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿತ್ತು. ಇದೀಗ ಅಧಿಕೃತಗೊಂಡಿದೆ. ಮತ್ತೆ ವೈಯಕ್ತಿಕ ಕಾರಣ ನೀಡಿ ಅವರು ಸರಣಿಯಿಂದಲೇ ಹೊರಗುಳಿಯಲು ನಿರ್ಧರಿಸಿದ್ದಾರೆ. ಕೊಹ್ಲಿಯ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ವೇಳೆ ಗಾಯಗೊಂಡು ದ್ವಿತೀಯ ಟೆಸ್ಟ್ನಿಂದ ಹೊರಗುಳಿದಿದ್ದ ಕೆ.ಎಲ್​ ರಾಹುಲ್​ ಮತ್ತು ರವೀಂದ್ರ ಜಡೇಜಾ ಮತ್ತೆ ತಂಡದಲ್ಲಿ ಸ್ಥಾನ ಪಡೆದರೂ ಕೂಡ ಅವರ ಫಿಟ್​ನೆಸ್​ ವರದಿಯ ಮೇಲೆ ಆಡುವ ಬಳಗದ ಆಯ್ಕೆ ಮಾಡಲಾಗುತ್ತದೆ. ಬೆನ್ನು ಮತ್ತು ತೊಡೆ ಸಂದು ಗಾಯದಿಂದ ಬಳಲುತ್ತಿರುವ ಶ್ರೇಯಸ್​ ಅಯ್ಯರ್​ ಹೊರಬಿದ್ದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತು ವಿಕೆಟ್‌ಕೀಪರ್-ಬ್ಯಾಟರ್ ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದರೂ ಕೂಡ ಅವರು ಆಡಬೇಕಾದರೆ ಫಿಟ್ನೆಸ್ ಕ್ಲಿಯರೆನ್ಸ್​ ಅಗತ್ಯ ಎಂದು ಬಿಸಿಸಿಐ ತಿಳಿಸಿದೆ. ಕಾರ್ಯದೊತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಮೂರನೇ ಪಂದ್ಯಕ್ಕೆ ಜಸ್​ಪ್ರೀತ್​ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ವಿಶ್ರಾಂತಿ ನೀಡಿಲ್ಲ.

ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್​ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ಕೆಎಸ್ ಭರತ್ (ವಿಕೆಟ್​ ಕೀಪರ್​), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್​ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

No Comments

Leave A Comment