ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪದಾಧಿಕಾರಗಳ ನೇಮಕ – ಅನಂತ್ಕುಮಾರ್ ಹೆಗಡೆಗೆ ಹಿನ್ನಡೆ
ಕಾರವಾರ:ಫೆ 10.ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಇಬ್ಬರು ಹಿರಿಯ ನಾಯಕ ನಡುವೆ ಪೈಪೋಟಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮತ್ತೊಂದೆಡೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಕೂಡ ಕಣಕ್ಕಿಳಿಯಲು ಮುಂದಾಗಿದ್ದಾರೆ. ಈ ನಡುವೆ ಉತ್ತರ ಕನ್ನಡ ಜಿಲ್ಲಾ ಪದಾಧಿಕಾರಗಳ ನೇಮಕವಾಗಿದ್ದು, ಅನಂತ್ ಕುಮಾರ್ ಹೆಗಡೆಗೆ ಹಿನ್ನಡೆಯಾಗಿದೆ.
ಜಿಲ್ಲಾ ಪದಾಧಿಕಾರಿಗಳ ನೇಮಕದಲ್ಲಿ ಮಾಜಿ ಶಾಸಕಿ ರೂಪಾಲಿ ನಾಯ್ಕ್ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಬಣದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ.
ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಸೂಚಿಸಿದವರ ಪೈಕಿ ಕೇವಲ ಇಬ್ಬರು ಮಾತ್ರ ಜಿಲ್ಲಾ ಬಿಜೆಪಿ ಪದಾಧಿಕಾರಿ ಆಗಿ ನೇಮಕ ಮಾಡಲಾಗಿದ್ದು, ಹೆಗಡೆ ಅವರರಿಗೆ ಹಿನ್ನಡೆಯಾಗಿದೆ.
ಪದಾಧಿಕಾರಿಗಳ ನೇಮಕ ಕಳೆದ 15 ದಿನಗಳ ಹಿಂದೆ ಕಾಗೇರಿ ಮತ್ತು ಅನಂತ್ ಕುಮಾರ್ ನಡುವೆ ಭಿನ್ನಾಭಿಪ್ರಾಯಕ್ಕೂ ಕಾರಣವಾಗಿತ್ತು.