ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಪಾಕಿಸ್ತಾನ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನು
ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.
ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿಗೆ ಜಾಮೀನು ದೊರೆತಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan gets bail in 12 cases) ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಗೆ ಶಿಕ್ಷೆ ವಿಧಿಸಿತ್ತು. ಇದೀಗ ಉಭಯ ನಾಯಕರಿಗೂ ಜಾಮೀನು ಮಂಜೂರಾಗಿದೆ.
ಆರ್ಥಿಕವಾಗಿ, ರಾಜಕೀಯವಾಗಿ ಸಂಕಷ್ಟದಲ್ಲಿರುವ ಪಾಕಿಸ್ತಾನ ಸಂಸತ್ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿತ್ತು. ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿಯಾಗುವ ಕನಸು ಕಂಡಿದ್ದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಿಎಂಎಲ್‌ಎನ್ ಮತ್ತು ಬಿಲಾವಲ್ ಭುಟ್ಟೋ ಅವರ ಪಿಪಿಪಿ ಭಾರೀ ಹಿನ್ನಡೆ ಸಾಧಿಸಿವೆ. ಹೀಗಾಗಿ ಪಾಕಿಸ್ತಾನದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು ಆಡಳಿತ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಹರಸಾಹಸಪಡುತ್ತಿವೆ.
339 ಸ್ಥಾನಗಳ ಪೈಕಿ 338 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಶುಕ್ರವಾರ ರಾತ್ರಿ ವೇಳೆಗೆ ಇಮ್ರಾನ್ ಬೆಂಬಲಿತ ಅಭ್ಯರ್ಥಿಗಳು 90 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಮುನ್ನಡೆ ಸಾಧಿಸಿದ್ದರೆ, ನವಾಜ್ ಷರೀಫ್ ಪಕ್ಷ 71, ಬಿಲಾವಲ್ ಭುಟ್ಟೋ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ 53 ಸ್ಥಾನಗಳಲ್ಲಿ ಗೆದ್ದಿವೆ. ಇತರ ಪಕ್ಷಗಳಿಂದ 27 ಮಂದಿ ಜಯಗಳಿಸಿದ್ದಾರೆ. ಪಾಕಿಸ್ತಾನದ ಚುನಾವಣಾ ಆಯೋಗ (ಇಸಿಪಿ) ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ಪಿಎಂಎಲ್‌ಎನ್ 71 ಸ್ಥಾನಗಳನ್ನು, ಪಿಪಿಪಿ 53 ಮತ್ತು ಇತರರು 27 ಸ್ಥಾನಗಳನ್ನು ಗೆದ್ದಿದ್ದಾರೆ.