ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಗೋವುಗಳೊಂದಿಗೆ ಪ್ರತಿಭಟನೆ: 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 6 ಗೋವುಗಳನ್ನು ಫ್ರೀಡಂ ಪಾರ್ಕ್‌ಗೆ ತಂದಿದ್ದ ಹಿನ್ನೆಲೆಯಲ್ಲಿ 9 ಮಂದಿ ಬಿಜೆಪಿ ನಾಯಕರ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿರುದ್ಧ ಮಂಗಳವಾರ ಫ್ರೀಡಂ ಪಾರ್ಕ್’ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮೊಂದಿಗೆ ಗೋವುಗಳನ್ನೂ ಕರೆತಂದಿದ್ದರು.
ಪ್ರತಿಭಟನೆ ತಡೆಯಲು ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು. ಈ ವೇಳೆ ಕೆಲ ನಾಯಕರು. ಗೋವುಗಳನ್ನೂ ಕೂಡ ತಮ್ಮೊಂದಿಗೆ ಬಸ್ ಗಳಲ್ಲಿ ಹತ್ತಿಸಲು ಮುಂದಾಗಿದ್ದರು.
ಬಸ್ ಗಳಲ್ಲಿ ಸಣ್ಣ ಬಾಗಿಲುಗಳಿರುವುದರಿಂದ ಅವುಗಳನ್ನು ಬಸ್ ಗಳ ಒಳಗೆ ಹತ್ತಿಸಲು ಸಾಧ್ಯವಾಗುತ್ತಿರಲಿಲ್ಲ. ಗೋವುಗಳ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಯಿತು. ಪ್ರತಿಭಟನಾ ಸ್ಥಳದಲ್ಲಿ ದೊಡ್ಡ ದೊಡ್ಡ ಸ್ಪೀಕರ್ ಗಳಲ್ಲಿ ಬರುತ್ತಿದ್ದ ಧ್ವನಿಯಿಂದಾಗಿ ಗೋವುಗಳು ಭೀತಿಗೊಳಗಾಗಿ ವಿವಿಧ ದಿಕ್ಕುಗಳಲ್ಲಿ ಓಡಲು ಪ್ರಯತ್ನಿಸುತ್ತಿದ್ದವು ಎಂದು ಪೊಲೀಸರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರತಿಭಟನೆ ವೇಳೆ ಗೋವುಗಳಿಗೆ ಹಿಂಸೆ ನೀಡಿದವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಅವರು ದೂರು ದಾಖಲಿಸಿದ್ದಾರೆ.
ಪಿ ರಾಜೀವ್, ಪಾಟೀಲ್ ನಡಹಳ್ಳಿ, ಹರೀಶ್, ಸಪ್ತಗಿರಿಗೌಡ ಸೇರಿದಂತೆ ಐವರ ವಿರುದ್ಧ ದೂರು ದಾಖಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದರೂ, ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರುವುದು ಕಾನೂನುಬಾಹಿರವಾಗಿದೆ. ಆರು ಹಸುಗಳನ್ನು ಪ್ರತಿಭಟನಾಕಾರರು ಅಮಾನವೀಯವಾಗಿ ನಡೆಸಿಕೊಂಡರು. ಈ ಜಾನುವಾರುಗಳ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದಂಡದ ರೂಪದಲ್ಲಿ ಶಿಕ್ಷೆಯಾಗಿದ್ದರೂ, ಇನ್ನು ಮುಂದೆ ಯಾವುದೇ ಪ್ರತಿಭಟನೆಗೆ ಪ್ರಾಣಿಗಳನ್ನು ಕರೆತರದಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.