ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಂಗಳೂರು: ಈ ತಿಂಗಳ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್

ಮಂಗಳೂರು: ಫೆ 12, ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷವೂ ಈ ಬಾರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ, ಇದು ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆಯಾಗಲಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಇದರ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 5 ಮಂದಿಯ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ.ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಗಳಿಸುವುದಿಲ್ಲ, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದ್ದು, ಸಮಾವೇಶದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ವಿವರಿಸಿದ್ದಾರೆ.

No Comments

Leave A Comment