Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ವಾಹನ ಮಾಲಿಕರಿಗೆ ಗುಡ್​​ ನ್ಯೂಸ್​: ಹೆಚ್​​​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅವಳಡಿಸುವ ಅವಧಿ ವಿಸ್ತರಣೆ

ಬೆಂಗಳೂರು, ಫೆಬ್ರವರಿ 14: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್​ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ಹೇಳಿದರು. ವಿಧಾನ್​ ಪರಿಷತ್​​ನಲ್ಲಿ (Vidhan Parishad) ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?

ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  1. https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.

  2. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.

  3. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.

  4. HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.

  5. HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

  6. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.

  7. ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.

  8. ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.

  9. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

  1. https://transport.karnataka.gov.in www.siam.in ಮೂಲಕ ಮಾತ್ರ HSRP ಅಳವಡಿಕೆ ಕಾಯ್ದಿರಿಸಿಕೊಳ್ಳಿ.

  2. ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ / ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP ಒಂದೇ ರೀತಿಯ ಪ್ರೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ, ಅವುಗಳು HSRP ಫಲಕಗಳಾಗಿರುವುದಿಲ್ಲ.

  3. HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು/ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ.

  4. ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಆಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ, HSRP ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

No Comments

Leave A Comment