ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹೆಜಮಾಡಿ ಶಾಖೆ ಉದ್ಘಾಟನೆ

ಪಡುಬಿದ್ರಿ: ಫೆ 18: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಪೂರ್ವಾಹ್ನ 10 ಗಂಟೆಗೆ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ವೈ ಸುಧೀರ್‌ ಕುಮಾರ್  ವಹಿಸಿದ್ದರು.

ಹೆಜಮಾಡಿ ಪೇಟೆಯಿಂದ ಹೆಜಮಾಡಿ ಶಾಖೆಯಯವರೆ ಗಣ್ಯರನ್ನು ಮೆರವಣಿಗೆಯಲ್ಲಿ ಕರೆ ತರಲಾಯಿತು.

ಬ್ಯಾಂಕಿಂಗ್ ಕಟ್ಟಡ ಉದ್ಘಾಟನೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ ನೆರವೇರಿಸಿದರು.

ಅತಿಥಿಗಳು ದೀಪ ಪ್ರಜ್ವಲನೆ ಮಾಡಿ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು ಇದರ ನಿರ್ದೇಶಕರಾದ ಬಿ ಜಯಕರ ಶೆಟ್ಟಿ ಇಂದ್ರಾಳಿ, ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ, ವೈ ಸುಕುಮಾರ್‌, ಹೆಜಮಾಡಿ ಗ್ರಾಪಂ ಅಧ್ಯಕ್ಷೆ ರೇಶ್ಮಾ ಮೆಂಡನ್‌, ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್, ಬ್ಯಾಂಕಿನ ಉಪಾಧ್ಯಕ್ಷ ಗುರುರಾಜ್ ಪೂಜಾರಿ, ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಬಾಲಗೋಪಾಲ್ ಬಲ್ಲಾಳ್, ನಿರ್ದೇಶಕರುಗಳಾದ ಕೆ ರಸೂಲ್ ವೈ.ಜಿ, ಶ್ರೀ ಗಿರೀಶ್ ಪಲಿಮಾರ್, ಶಿವರಾಮ ಎನ್. ಶೆಟ್ಟಿ, ರಾಜಾರಾಮ್ ರಾವ್, ವಾಸುದೇವ ದೇವಾಡಿಗ, ಯಶವಂತ್ ಪಿ.ಬಿ., ಮಾಧವ ಆಚಾರ್ಯ, ಸ್ಪ್ಯಾನಿ ಕ್ವಾಡ್ರಸ್, ಶ್ರೀಮತಿ ಸುಚರಿತ ಎಲ್. ಅಮೀನ್, ಶ್ರೀಮತಿ ಕುಸುಮಾ ಎಮ್. ಕರ್ಕೇರ, ಶ್ರೀಮತಿ ಕಾಂಚನ ಉಪಸ್ಥಿತರಿದ್ದರು.

No Comments

Leave A Comment