ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಮಂಗಳೂರು: ಖ್ಯಾತ ಕಾದಂಬರಿಕಾರ ಭಾಷಾ ತಜ್ಞ ಕೆ.ಟಿ ಗಟ್ಟಿ ವಿಧಿವಶ
ಮಂಗಳೂರು: ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ(86) ನಿಧನರಾಗಿದ್ದಾರೆ. ಮೂಲತ ಕಾಸರಗೋಡಿನ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ ಪ್ರಾಧ್ಯಾಪಕರಾಗಿ ದುಡಿದವರು. ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು.
ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ 22 ಜುಲೈ 1938ರಲ್ಲಿ ಜನನ. ತಂದೆ ಧೂಮಪ್ಪ ಗಟ್ಟಿ. ತಾಯಿ ಪರಮೇಶ್ವರಿ. ಕಾಸರಗೋಡಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ. ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾದ ನಂತರ ಕಾಸರಗೋಡಿನ ಚಳವಳಿಯಲ್ಲಿ ಬಾಗಿ. ನಂತರ ಪಿ.ಯು. ಹಾಗೂ ಬಿ.ಎ. ಪದವಿಗಳನ್ನು ಕೇರಳ ವಿಶ್ವವಿದ್ಯಾಲಯದಿಂದ ಪಡೆದರು. ಎರಡು ವರ್ಷಗಳ ಶಿಕ್ಷಕರ ತರಬೇತಿ ಪಡೆದದ್ದು ಮಾಯಿಪ್ಪಾಡಿಯ ಸರ್ಕಾರಿ ಬೇಸಿಕ್ ಟ್ರೈನಿಂಗ್ ಶಾಲೆಯಿಂದ ಮತ್ತು ತಲಚೇರಿಯ ಸರ್ಕಾರಿ ಟ್ರೈನಿಂಗ್ ಕಾಲೇಜಿನಿಂದ ಒಂದು ವರ್ಷದ ಬಿಎಡ್ ಪದವಿ ಪಡೆದರು.
ಕಾಸರಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವಿಯನ್ನು ಬಾಹ್ಯವಾಗಿ ಪಡೆದರು. 1968ರಲ್ಲಿ ಮಣಿಪಾಲದ ಎಂ.ಐ.ಟಿ. ಸಂಸ್ಥೆಯಲ್ಲಿ ಆರು ವರ್ಷಗಳ ಕಾಲ ಇಂಗ್ಲಿಷ್ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದರು. ನಂತರ ಒಂದು ವರ್ಷ ಉಡುಪಿಯ ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲೂ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.