ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಸುಮಲತಾಗೆ ಹಿನ್ನಡೆ, ಡಾ. ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್!?

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ.

ದೆಹಲಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಎಂದು ಅಮಿತ್ ಶಾ ಮಾತುಕೊಟ್ಟಿದ್ದು ಮಂಡ್ಯ, ಹಾಸನದಲ್ಲಿ ನಿಮ್ಮ ಶಾಸಕರಿಂದಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ.

ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಆಗಿದೆ ಎಂದು ಹೇಳಲಾಗಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್​ಡಿಕೆಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

kiniudupi@rediffmail.com

No Comments

Leave A Comment