ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ಅಧಿಕಾರ ಸ್ವೀಕಾರ
ಉಡುಪಿ: ಬಿಜೆಪಿ ಉಡುಪಿ ನಗರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಅಮೀನ್ ರವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ನಿಕಟಪೂರ್ವ ನಗರಾಧ್ಯಕ್ಷ ಮಹೇಶ್ ಠಾಕೂರ್ ರವರಿಂದ ಬಿಜೆಪಿ ಉಡುಪಿ ನಗರ ಕಛೇರಿಯಲ್ಲಿ ಅಧಿಕಾರ ಹಸ್ತಾಂತರ ಪಡೆದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸ್ಥಳೀಯ ನಗರಸಭಾ ಸದಸ್ಯ ಗಿರೀಶ್ ಎಮ್. ಅಂಚನ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಕುತ್ಪಾಡಿ, ವಿಜಯ ಭಟ್, ಸಂತೋಷ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.