ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ’ -ಗೋಬ್ಯಾಕ್ ಅಭಿಯಾನಕ್ಕೆ ಶೋಭಾ ತಿರುಗೇಟು
ಚಿಕ್ಕಮಗಳೂರು:ಫೆ 24. ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ತಮ್ಮ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಲಾಗುತ್ತಿದ್ದು, ನಿಜವಾದ ಬೆಜೆಪಿ ಕಾರ್ಯಕರ್ತರು ಈ ರೀತಿ ಆರೋಪವನ್ನು ಮಾಡುವುದಿಲ್ಲ. ಯಾರೋ ಈ ರೀತಿ ಮಾಡಿಸಿದ್ದಾರೆ. ಅಧಿಕಾರಕ್ಕಾಗಿ ನಮ್ಮ ಪಕ್ಷಕ್ಕೆ ಬಂದವರು ಈ ರೀತಿ ಮಾಡಿಸಿರಬಹುದು, ಹಿಂದಿದ್ದ ಪಕ್ಷದಲ್ಲಿ ಇಂತಹ ಚಾಳಿಯನ್ನು ನಡೆಸಿದ್ದಾರೆ. ಇಲ್ಲೂ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟಿಕೆಟ್ ಕೇಳಲು ಎಲ್ಲರಿಗೂ ಅವಕಾಶವಿದೆ. ಆದರೆ ಇನ್ನೊಬ್ಬರ ತೇಜೋವಧೆ ಮಾಡುವ ಕೆಲಸ ಮಾಡಬಾರದು. ನಾವು ನಮ್ಮ ವಿರುದ್ದ ನಿಲ್ಲುವ ಅಭ್ಯರ್ಥಿಯನ್ನು ಅಲ್ಲಗಳೆಯುವುದಿಲ್ಲ ಎಂದು ಹೇಳಿದ್ದಾರೆ.