ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಪಾಕ್ ನ ಮೊದಲ ಮಹಿಳಾ ಸಿಎಂ ಆಗಿ ನವಾಬ್ ಷರೀಫ್ ಪುತ್ರಿ ಆಯ್ಕೆ
ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ ಇತ್ತೆಹಾದ್ ಕೌನ್ಸಿಲ್(ಎಸ್ ಐಸಿ)ನ ನಾಯಕ ರಾಣಾ ಅಫ್ತಾಬ್ ಹಾಗೂ ಪಿಎಂಎಲ್-ಎನ್ ಪಕ್ಷದ ಮರ್ಯಮ್ ಅವರು ವಿಜಯ ಸಾಧಿಸಿದ್ದಾರೆ. ಈ ಮೂಲಕ ಮರ್ಯಮ್ ಅವರು 12 ಕೋಟಿ ಜನಸಂಖ್ಯೆ ಹೊಂದಿರುವ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಸಿಎಂ ಆಗಿದ್ದಾರೆ.
2012ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಮರ್ಯಮ್ ಅವರು, 2013ರ ಸಾರ್ವತ್ರಿಕ ಚುನಾವಣೆಯ ವೇಳೆ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿದ್ದರು. 2024ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಪಾಕ್ ನ ರಾಷ್ಟ್ರೀಯ ಅಸೆಂಬ್ಲಿ ಮತ್ತು ಪಂಜಾಬ್‌ನ ಪ್ರಾಂತೀಯ ಅಸೆಂಬ್ಲಿಗೆ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ.