ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಸಮಾಜವಾದಿ ಪಕ್ಷದ ಹಿರಿಯ ನಾಯಕ, ಸಂಸದ ಶಫೀಕರ್ ರಹಮಾನ್ ಬಾರ್ಕ್ ವಿಧಿವಶ

ಲಕ್ನೋ: ಫೆ 27: ಸಮಾಜವಾದಿ ಪಕ್ಷದ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಸಂಭಾಲ್ ಸಂಸದ ಶಫೀಕರ್ ರಹಮಾನ್ ಬಾರ್ಕ್(94) ಅವರು ಅನಾರೋಗ್ಯದಿಂದಾಗಿ ಇಂದು ವಿಧಿವಶರಾಗಿದ್ದಾರೆ.

ಶಫೀಕರ್ ರಹಮಾನ್ ಬಾರ್ಕ್ ಅವರು ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದರು. ಮೊರಾದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಶಫೀಕರ್ ರಹಮಾನ್ ಬಾರ್ಕ್ ಅವರು ತಮ್ಮ ರಾಜಕೀಯ ಜೀವನವನ್ನು ಚೌಧರಿ ಚರಣ್ ಸಿಂಗ್ ಅವರೊಂದಿಗೆ ಪ್ರಾರಂಭಿಸಿದ್ದರು. ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕ ಸದಸ್ಯರೂ ಆದ ಅವರು, 5 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ ಮುರಾದಾಬಾದ್ ಲೋಕಸಭಾ ಕ್ಷೇತ್ರದಲ್ಲಿ 3 ಬಾರಿ ಹಾಗೂ ಸಂಭಾಲ್ ಲೋಕಸಭಾ ಕ್ಷೇತ್ರವನ್ನು 2 ಬಾರಿ ಗೆದ್ದಿದ್ದರು.

ಇನ್ನು ಶಫೀಕರ್ ರಹಮಾನ್ ಬಾರ್ಕ್ ಅವರ ನಿಧನಕ್ಕೆ ಎಸ್ ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಲವು ರಾಜಕೀಯ ಗಣ್ಯರು ಕಂಬನಿ ಮಿಡಿದ್ದಾರೆ.

No Comments

Leave A Comment