ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಉಡುಪಿ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಯತ್ನ: ಶಾಸಕ ಸಹಿತ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮಂಗಳೂರು/ಉಡುಪಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಭಾರತೀಯ ಜನತಾ ಪಕ್ಷದ ಸದಸ್ಯರು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.
ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, ಕಾಂಗ್ರೆಸ್ ಕಚೇರಿ ಮುಂದೆ ಜಮಾಯಿಸಿ ಘೋಷಣೆ ಕೂಗಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಉಡುಪಿ: ಇದೇ ವಿಚಾರವಾಗಿ ಬಿಜೆಪಿ ಪಕ್ಷ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಬಿಜೆಪಿ ಸಿದ್ದತೆ ನಡೆಸಿದೆ.
ಏತನ್ಮಧ್ಯೆ, ಬಿಜೆಪಿಯ ಈ ಕ್ರಮವನ್ನು ಪ್ರತಿಭಟಿಸಿ, ಕಾಂಗ್ರೆಸ್ ತನ್ನ ಸದಸ್ಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವಂತೆ ಕರೆ ನೀಡಿದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ , ಈ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು.