ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲೇ ಬಂದು ಪ್ರತಿಭಟಿಸಿದ ಬಿಜೆಪಿ ಶಾಸಕರು

ಬೆಂಗಳೂರು, ಫೆ 28: ಬಿಜೆಪಿಯ ಎಲ್ಲಾ ಶಾಸಕರು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಶಾಸಕರ ಭವನದಿಂದ ವಿಧಾನಸೌಧಕ್ಕೆ ಕಾಲ್ನಡಿಗೆಯಲ್ಲಿ ಆಗಮಿಸಿ ರಾಜ್ಯ ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಖಂಡಿಸಿದರು.

ರಾಜ್ಯ ಸರಕಾರದ ಜನವಿರೋಧಿ ಕ್ರಮ ವಿರೋಧಿಸಿ ಈ ವಿಶಿಷ್ಟ ರೀತಿಯ ಪ್ರತಿಭಟನೆ ಮಾಡಿದ್ದಾಗಿ ಬಿಜೆಪಿ ತಿಳಿಸಿದೆ. ಇನ್ನು ಇದೇ ವಿಚಾರವಾಗಿ ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಆಶೋಕ್ “ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿರುವುದು ರಾಜ್ಯದ ಜನರಲ್ಲಿ ಭಯದ ವಾತಾವರಣ ಮೂಡಿಸಿದೆ. ವಿಧಾನಸೌಧದಲ್ಲೇ ಪಾಕಿಸ್ಥಾನದ ಪರವಾಗಿ ಘೋಷಣೆ ಕೂಗುತ್ತಾರೆ ಎಂದಾದರೆ ರಾಜ್ಯದ ಹಳ್ಳಿ ಗಲ್ಲಿಗಳನ್ನು ಪಾಕಿಸ್ಥಾನ ಮಾಡುತ್ತಾರೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

No Comments

Leave A Comment