ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ರಾಜೀವ್ ಗಾಂಧಿ ಹತ್ಯೆ ಅಪರಾಧಿ ಶಾಂತನ್ ನಿಧನ
ಚೈನ್ನೈ, ಫೆ 28 : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 7 ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್ ಇಂದು ಬೆಳಗ್ಗೆ ಚೈನ್ನೈನಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲತ ಶ್ರೀಲಂಕಾದ ಟಿ. ಸುತೇಂದ್ರರಾಜ ಅಲಿಯಾಸ್ ಶಾಂತನ್ ( 55) ಅವರು ಲಿವರ್ ವೈಫಲ್ಯ, ಬಹು ಅಂಗಾಗಲ ವೈಫಲ್ಯದಿಂದ ಜನವರಿ ತಿಂಗಳಲ್ಲಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
1991 ರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಂದಿನ ಪ್ರಧಾನಿ ರಾಜೀವ್ ಗಾಂಧಿಯನ್ನು ಬಹುದೊಡ್ಡ ಪ್ಲಾನ್ ಮಾಡಿ ಶ್ರೀಲಂಕಾದಿಂದ ಭಾರತಕ್ಕೆ ಬಂದು ವ್ಯವಸ್ಥಿತವಾಗಿ ಬಾಂಬ್ ಸ್ಫೋಟಿಸಿ ಹತ್ಯೆ ಮಾಡಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ಪೈಕಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 32 ವರ್ಷಗಳ ಬಳಿಕ 6 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.