Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಸಂದೇಶ್‌ಖಾಲಿ ಲೈಂಗಿಕ ಕಿರುಕುಳ, ಭೂ ಕಬಳಿಕೆ ಪ್ರಕರಣ: ಮುಖ್ಯ ಆರೋಪಿ ಟಿಎಂಸಿ ನಾಯಕ ಶಾಜಹಾನ್ ಬಂಧನ

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಆರೋಪಿ ಟಿಎಂಸಿ ನಾಯಕ ಶಾಜಹಾನ್ ಶೇಖ್‌ನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ ವಿಶೇಷ ಪಡೆಯು ‘ಉತ್ತರ 24 ಪರಗಣ’ ಜಿಲ್ಲೆಯಲ್ಲಿ ತಡರಾತ್ರಿ ಬಂಧಿಸಿದೆ.

ಬಳಿಕ ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ದಿದೆ. ವಿಶೇಷ ತಂಡವು ಶೇಖ್‌ ಅವರ ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಿಎಂಸಿ ನಾಯಕ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಹಲವು ಮಂದಿ ಮಹಿಳೆಯರು ಆರೋಪಿಸಿದ್ದರು. ಅದಾದ ಬಳಿಕ, ‘ಉತ್ತರ 24 ಪರಗಣ’ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ.

2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್‌, ಜನವರಿ 5ರಿಂದ ನಾಪತ್ತೆಯಾಗಿದ್ದರು. ಶೇಖ್‌, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ.

ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರನ್ನು ಬಂಧಿಸುವಂತೆ ಕೊಲ್ಕತ್ತಾ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸಂದೇಶಖಾಲಿಯಲ್ಲಿ ಶಹಜಹಾನ್ ನಡೆಸಿದ ದೌರ್ಜನ್ಯದ ಬಗ್ಗೆ ವಿವರವಾಗಿ 72 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಎಂಸಿ ನಾಯಕ ಶಾಜಹಾನ್ ಶೇಖ್
ಟಿಎಂಸಿ ನಾಯಕ ಶಾಜಹಾನ್ ಶೇಖ್‌ ಬಂಧನಕ್ಕೆ ತಡೆ ಇಲ್ಲ, ಪೊಲೀಸರು ಬಂಧಿಸಬಹುದು: ಸಂದೇಶ್‌ಖಾಲಿ ವಿವಾದಕ್ಕೆ ಕಲ್ಕತ್ತಾ ಹೈಕೋರ್ಟ್
ಸಂದೇಶಖಾಲಿಯಲ್ಲಿ ಮಗುವನ್ನು ದುಷ್ಕರ್ಮಿಗಳು ಎಸೆದ ಘಟನೆಯ ಕುರಿತು ತನಿಖೆ ನಡೆಸಿ ವರದಿಯನ್ನು ತಮ್ಮ ಕಚೇರಿಗೆ ಸಲ್ಲಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment