ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ
ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ.
ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. ‘ಉದಯವಾಣಿ’ ಪತ್ರಿಕೆಯ ಮಂಗಳೂರು ಬ್ಯೂರೋದ ಮುಖ್ಯಸ್ಥರಾಗಿದ್ದ ಮನೋಹರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಸಂದೇಶ ಪ್ರತಿಷ್ಠಾನದ ಪ್ರಶಸ್ತಿ ಅರಸಿ ಬಂದಿದ್ದವು.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಇವರ ನಿಧನಕ್ಕೆ ಕರಾವಳಿಕಿರಣ ಡಾಟ್ ಕಾ೦ ಬಳಗವು ಸ೦ತಾಪವನ್ನು ಸೂಚಿಸಿದೆ