ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!
ಬೆಂಗಳೂರು, (ಮಾರ್ಚ್ 01): ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್ ರಾಮೇಶ್ವರಂ ಕೆಫೆಯಲ್ಲಿ(rameshwaram cafe) ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.
ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಆದ್ರೆ, ಸ್ಫೋಟಕ್ಕೆ ಕಾರಣ ಏನು ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿದಲ್ಲ. ಸ್ಥಳಕ್ಕೆ ಎಚ್ಎಎಲ್ ಪೊಲೀಸ್ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.