ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
Women’s day: ಇನ್ಪೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ
ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.ಖುಷಿಯ ವಿಚಾರವನ್ನು ಹಂಚಿಕೊಂಡಿರುವ ಅವರು, “ಭಾರತದ ರಾಷ್ಟ್ರಪತಿಗಳು ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.
ಸಮಾಜಸೇವೆ, ಲೋಕೋಪಕಾರಿ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ಪ್ರಬಲ ಸಾಕ್ಷಿಯಾಗಿದೆ. ನಾರಿ ಶಕ್ತಿ’, ನಮ್ಮ ದೇಶದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ರಾಜ್ಯಸಭೆ ಸದಸ್ಯೆಯಾಗಿ ಅವರ ಮುಂದಿನ ಪಯಣ ಶುಭಕರವಾಗಿರಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ.