ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಉಡುಪಿ: ನಿಯಂತ್ರಣ ತಪ್ಪಿದ ಬೈಕ್ -21 ವರ್ಷದ ಯುವಕ ಮೃತ್ಯು
ಉಡುಪಿ, ಮಾ,08 :ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ.
ಮಾರ್ಚ್ 08 ರ ನಸುಕಿನ ವೇಳೆ ಸ್ವಸ್ತಿಕ್ ತನ್ನ ಮೋಟಾರು ಬೈಕನ್ನು ಚಲಾಯಿಸಿಕೊಂಡು ಉಡುಪಿ ಕಡೆಗೆ ಬರುವ ಸಂಧರ್ಭದಲ್ಲಿ, ನಿಟ್ಟೂರಿನ ಹುಂಡೈ ಶೋರೂಮ್ ಬಳಿ ಬರುತ್ತಿದ್ದಂತೆ ವಾಹನದ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಮಧ್ಯಾಹ್ನದ ವೇಳೆಗೆ ಆತ ಮೃತಪಟ್ಟಿದ್ದಾನೆ. ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ದಾಖಲಾಗಿದೆ .