ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ.
ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.
ಕಳೆದ 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾ ಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿದ್ದ,ಉತ್ಸವಗಳು ನಡೆಯುವಾಗ ಸೊಂಡಿಲು ಎತ್ತಿ ನಮಸ್ಕರಿಸುತ್ತಾ ಸಾಗುವುದನ್ನು ನೋಡುವುದೇ ಒಂದು ಖುಷಿಯಾಗಿತ್ತು. ವಯಸ್ಸಾಗಿರೋ ಲತಾ ಶಿವರಾತ್ರಿಯಂದೇ ಶಿವನ ಪಾದ ಸೇರಿದ್ದು, ಧರ್ಮಸ್ಥಳ ಕ್ಷೇತ್ರದ ಜನರು ಕಂಬನಿ ಮಿಡಿದಿದ್ದಾರೆ.ಲತಾ ಆನೆಯ ಅಂತ್ಯ ಸಂಸ್ಕಾರ ಇಂದು ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.