ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
‘ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ’- ಸದಾನಂದಗೌಡರಿಂದ ಅಚ್ಚರಿ ಹೇಳಿಕೆ
ಬೆಂಗಳೂರು:ಮಾ, 09: ಕೆಲವು ದಿನಗಳ ಹಿಂದೆ ಚುನಾವಣಾ ರಾಜಕೀಯದಿಂದ ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು.
ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎನ್ನುವ ಮೂಲಕ ಮತ್ತೊಮ್ಮೆ ರಾಜಕೀಯ ವಲಯದಲ್ಲಿಅಚ್ಚರಿ ಹೇಳಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿದ್ದೆ. ಕ್ಷೇತ್ರದ ಎಲ್ಲ ಶಾಸಕರು, ಮುಖಂಡರು ನೀವೇ ಸ್ಪರ್ಧಿಸುವಂತೆ ಒತ್ತಾಯ ಮಾಡಿದ್ದಾರೆ. ಇನ್ನೂ ನಾನು ಹತ್ತು ವರ್ಷ ರಾಜಕೀಯದಲ್ಲಿರಬಹುದು. ಒಂದು ವೇಳೆ ನನಗೆ ಟಿಕೆಟ್ ಕೊಡದಿದ್ರೆ, ಸ್ವಲ್ಪ ನೋವಾಗುತ್ತದೆ. ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ ಎಂದು ಹೇಳಿದ್ದಾರೆ.