ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬೆಂಗಳೂರು: ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ಶನಿವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಗ್ಯಾರೇಜ್ ನಲ್ಲಿ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಪಾದಚಾರಿ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಜಾರ್ಜ್ ಎಂಬುವವರು ಗ್ಯಾರೇಜ್ ನಡೆಸುತ್ತಿದ್ದಾರೆ. ಶನಿವಾರ ಸಂಜೆ ಕಾರೊಂದರ ವೆಲ್ಡಿಂಗ್ ಮಾಡುವಾಗ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಬೆಂಕಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್’ಗೆ ತಾಕಿ ಸ್ಫೋಟಗೊಂಡಿದೆ.
ಸ್ಫೋಟದ ರಭಸಕ್ಕೆ ಗ್ಯಾರೇಜ್ ಸೇರಿದಂತೆ ಸುತ್ತಮುತ್ತಲ ಹಲವು ಮನೆಗಳು ಹಾಗೂ ನಿರ್ಮಾಣ ಹಂತದ ಕಟ್ಟಡಕ್ಕೆ ಹಾನಿಯಾಗಿದೆ. ಈ ವೇಳೆ ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಪಾದಚಾರಿಗಳು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಸ್ಫೋಟದ ವಿಚಾರ ತಿಳಿದು ಮಾಗಡಿ ರಸ್ತೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.