ಲೋಕಸಭೆ ಚುನಾವಣೆಗೂ ಮುನ್ನವೇ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ದಿಢೀರ್ ರಾಜಿನಾಮೆ!
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ. ಅರುಣ್ ಗೋಯಲ್ ಅವರ ಈ ಹೆಜ್ಜೆಯ ನಂತರ ಇದೀಗ ಚುನಾವಣಾ ಆಯೋಗದಲ್ಲಿ 2 ಹುದ್ದೆಗಳು ಖಾಲಿ ಇದೆ.
ಇದೀಗ ಚುನಾವಣಾ ವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಅರುಣ್ ಗೋಯಲ್ ಅವರು ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಚುನಾವಣಾ ತಯಾರಿಗಾಗಿ ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದರು. ಇದೀಗ ದಿಢೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2024ರ ಲೋಕಸಭೆ ಚುನಾವಣೆ ದಿನಾಂಕ ಮುಂದಿನ ವಾರದ ಪ್ರಕಟ ಸಾಧ್ಯತೆ!