ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಗೋಬಿ ಮಂಚೂರಿ ನಿಷೇಧ: ವರದಿ ಪರಿಶೀಲಿಸಿ ಸೋಮವಾರ ನಿರ್ಧಾರ- ಸಚಿವ ದಿನೇಶ್‌ ಗುಂಡೂರಾವ್‌

ಸುಳ್ಯ:ಮಾ,10:ಗೋಬಿ ಮಂಚೂರಿ ಖಾದ್ಯದ ಬಗ್ಗೆ ಪರೀಕ್ಷೆ ನಡೆಸುವಂತೆ ಹೇಳಲಾಗಿತ್ತು. ಅದರಂತೆ ಪರೀಕ್ಷೆ ನಡೆಸಲಾಗಿದ್ದು, ವರದಿಯನ್ನು ಪರಿಶೀಲನೆ ನಡೆಸಿ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಸೋಮವಾರ ತಿಳಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ನಿಷೇಧ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ನಿಷೇಧ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಮಾಹಿತಿ ಬರುತ್ತಿರುವ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ವರದಿ ನೋಡಿಕೊಂಡು ಏನು ಮಾಡಬೇಕು, ಆ ಬಗ್ಗೆ ಸೋಮವಾರ ತಿಳಿಸುತ್ತೇ ವೆ ಎಂದರು.

ಇನ್ನು ಕುಕ್ಕೆ ಸುಬ್ರಮಣ್ಯದಲ್ಲಿ ಸುಸಜ್ಜಿತ ಆಸ್ಪತ್ರೆ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರೋಗ್ಯ ಆಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಎಂದು ಹೇಳಿದರು.

No Comments

Leave A Comment