ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ನವದೆಹಲಿ:ಮಾ,10: ಲೋಕಸಭೆ ಚುನಾವಣೆ ಬೆನ್ನಲ್ಲೇ ಹಿಸಾರ್‌ನ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಅವರು ರಾಜಕೀಯ ಕಾರಣಗಳಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿದ್ದು, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬ್ರಿಜೇಂದ್ರ ಸಿಂಗ್ ಅವರು ರಾಜೀನಾಮೆ ಘೋಷಿಸಿದ ಬಳಿಕ ಬಿಜೆಪಿ ನಾಯಕ ಬಿರೇಂದರ್ ಸಿಂಗ್ ಅವರ ಪುತ್ರ ಬ್ರಿಜೇಂದ್ರ ಸಿಂಗ್ ಅವರು ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ವಿರೋಧ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನ ಮಂತ್ರಿ. ನರೇಂದ್ರ ಮೋದಿ ಮತ್ತು ಶಾ ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಬ್ರಿಜೇಂದ್ರ ಸಿಂಗ್ ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳುವ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್ ಮತ್ತು ದೀಪಕ್ ಬಬಾರಿಯಾ ಅವರು ಉಪಸ್ಥಿತರಿದ್ದರು.