ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬೆಂಗಳೂರು : ರಾಜ್ಯದಲ್ಲಿ ಗೋಬಿ ಜೊತೆ ಕಬಾಬ್ ನಿಷೇಧ ಮಾಡಲು ಆಹಾರ ತಜ್ಞರು ಮತ್ತು ವೈದ್ಯರ ಒತ್ತಾಯ.
ಬೆಂಗಳೂರು : ಯುವಕರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗಲಿದ್ದು ಕಬಾಬ್ ಕೂಡ ನಿಷೇಧಿಸುವಂತೆ ಒತ್ತಾಯ ಕೇಳಿಬಂದಿದೆ.
ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್ ಎಲ್ಲೋ ಮತ್ತು ಥರ್ಟಜೈನ್ ಪತ್ತೆಯಾಗಿರುವುದರಿಂದ ರಾಜ್ಯ ಸರಕಾರವು ಅಸುರಕ್ಷಿತ ಗೋಬಿ ಮಂಚೂರಿಗಳನ್ನು ನಿಷೇಧಿಸಲು ನಿರ್ಧರಿಸಿದೆ.
ಇತ್ತೀಚೆಗಷ್ಟೇ ರಾಜ್ಯದಲ್ಲಿ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ)ಯನ್ನೂನ್ ನಿಷೇಧಿಸಲಾಗಿತ್ತು.ಇದರ ಬೆನ್ನಲ್ಲೇ ಆಹಾರ ಮತ್ತು ಸುರಕ್ಷತೆ ಇಲಾಖೆಯು ಸಲ್ಲಿಸಿರುವ ವರದಿ ಆಧರಿಸಿ ಮಹತ್ವದ ನಿರ್ಧಾರ ಕೈಗೊಳ್ಳಲು ಸರಕಾರ ಮುಂದಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಾಳೆ ಗೋಬಿ ಮಂಚೂರಿ ನಿಷೇಧಿಸುವ ಕುರಿತು ಅಧಿಕೃತವಾಗಿ ಘೋಷಿಸುವ ಸಾಧ್ಯತೆಗಳಿವೆ.
ಕೃತಕ ಬಣ್ಣ ಬೆರೆಸಿದ ಗೋಬಿ: ಆರೋಗ್ಯ ಇಲಾಖೆಯು ಎಲ್ಲ ಜಿಲ್ಲೆಗಳಿಂದ ಮಾದರಿ ಸಂಗ್ರಹಿಸಿ ಟೆಸ್ಟ್ ಕಳುಹಿಸಲು ಸೂಚನೆ ನೀಡಿತ್ತು. ಅದರಂತೆ ರಾಜ್ಯದ 121ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100 ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ.
ನೂರಕ್ಕೂ ಹೆಚ್ಚಿನ ಮಾದರಿಗಳಲ್ಲಿಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ, ರಾಸಾಯನಿಕ ಅಂಶಗಳನ್ನು ಗೋಬಿ ಮಂಚೂರಿಗಳಲ್ಲಿ ಬಳಸದ೦ತೆ ಸೂಚಿಸುವ ಸಾಧ್ಯತೆ ಇದೆ. ಕೃತಕ ಬಣ್ಣ ಬೆರೆಸುವುದಕ್ಕೂ ಅವಕಾಶವಿರುವುದಿಲ್ಲ.
ಕಬಾಬ್‌ಗೂ ಕಂಟಕ: ಗೋಬಿ ಮಂಚೂರಿ ಮಾದರಿಯಲ್ಲಿಯೇ ಚಿಕನ್ ಕಬಾಬ್ ಸಿದ್ಧಪಡಿಸಲಾಗುತ್ತಿದ್ದು, ಕಬಾಬ್‌ನ ರುಚಿ ಹೆಚ್ಚಿಸಲು, ಆಕರ್ಷಕವಾಗಿ ಕಾಣುವಂತೆ ಮಾಡಲು ಪೌಡರ್ಬ ಳಸಲಾಗುತ್ತದೆ. ಇದು ಕೂಡ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕೂಡಲೇ ಈ ಮಾದರಿಯ ಕಬಾಬ್ ಅನ್ನು ನಿಷೇಧಿಸಬೇಕೆಂದು ಆಹಾರ ತಜ್ಞರು ಮತ್ತು ವೈದ್ಯರು ಒತ್ತಾಯಿಸಿದ್ದಾರೆ. ಕಬಾಬ್ ನಿಷೇಧಿಸುವ ಕೂಗು ಕೇಳಿ ಬರುತ್ತಿದೆ.ಕಬಾಬ್ ಹಸಿರು ಹಾಗೂ ಕೆಂಪು ಬಣ್ಣದಲ್ಲಿ ದೊರಕುತ್ತದೆ. ಕಬಾಬ್‌ಗೆ ಕೆಮಿಕಲ್ ಬಳಸಿ ಬಣ್ಣ ಬದಲಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ.