Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ನನ್ನ ವಿರೋಧಿಸಿದವರಿಗೂ ಟಿಕೆಟ್ ಸಿಗಲಿಲ್ಲ: ಡಿವಿಎಸ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ!

ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿ, ಸಹಕಾರ ನೀಡುವಂತೆ ಶೋಭಾ ಅವರು ಕೇಳಿಕೊಂಡಿದ್ದಾರೆ.

ಕಳೆದ ಬಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರಿಗೆ ಈ ಬಾರಿ ಆ ಕ್ಷೇತ್ರದಿಂದ ಸ್ಪರ್ಧಿಸಲು ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿತ್ತು. ಈಗ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ. ಇತ್ತ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದಲೂ ಅವರಿಗೆ ಗೋ ಬ್ಯಾಕ್ ಬಿಸಿ ತಟ್ಟಿತ್ತು. ಆದರೂ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೆಲವರು ಪ್ರಾಯೋಜನೆ ಮಾಡಿ ವಿರೋಧಿಸುವಂತೆ ಮಾಡಿದರು. ಆದರೆ, ಹಾಗೆ ಮಾಡಿದವರು ಕೂಡ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ವಿರೋಧ ಮಾಡುವವರಿಗೆ ಟಿಕೆಟ್ ಸಿಗಲ್ಲ. ಇನ್ನಾದರೂ ವಿರೋಧ ಮಾಡುವವರು ಪಾಠ ಕಲಿಯಬೇಕು.

– ಶೋಭಾ ಕರಂದ್ಲಾಜೆ, ಸಂಸದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿ ನಾಯಕರ ಮೇಲೆ ನನಗೆ ವಿಶ್ವಾಸ ಇತ್ತು. ಅವರು ಯಾವ ಜವಾಬ್ದಾರಿ ನನಗೆ ವಹಿಸಿದ್ರು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಯಾವುದೇ ರಾಜ್ಯದ ಚುನಾವಣೆಯಾಗಲಿ, ಯಾವುದೇ ಇಲಾಖೆ ಆಗಲಿ ಅಲ್ಲೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೆ. ಈ ಕಾರಣಕ್ಕೆ ನನ್ನ ನಾಯಕತ್ವವನ್ನು ಗುರುತಿಸಿ ಟಿಕೆಟ್ ಕೊಟ್ಟಿದ್ದಾರೆ ಎಂದಿದ್ದಾರೆ.

ಈ ಮಧ್ಯೆ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಶೋಭಾ ಕರಂದ್ಲಾಜೆ ಪರೋಕ್ಷ ವಾಗ್ದಾಳಿ ನಡೆಸಿದ್ದು, ವಿರೋಧಿಸುವವರಿಗೆ ಟಿಕೆಟ್ ಸಿಗುವುದಿಲ್ಲ ಎಂದಿದ್ದಾರೆ. ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಆದರೆ, ಕೆಲವರು ಅದನ್ನು ವಿರೋಧಿಸಿದ್ದಾರೆ.

ಕೆಲವರು ಪ್ರಾಯೋಜನೆ ಮಾಡಿ ವಿರೋಧಿಸುವಂತೆ ಮಾಡಿದರು. ಆದರೆ, ಹಾಗೆ ಮಾಡಿದವರು ಕೂಡ ಟಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ವಿರೋಧ ಮಾಡುವವರಿಗೆ ಟಿಕೆಟ್ ಸಿಗಲ್ಲ. ಇನ್ನಾದರೂ ವಿರೋಧ ಮಾಡುವವರು ಪಾಠ ಕಲಿಯಬೇಕು. ಪಕ್ಷ ವಿರೋಧಿಸುವವರಿಗೆ ಹೈಕಮಾಂಡ್​​ ಮಣೆ ಹಾಕಲ್ಲ ಎಂದು ಶೋಭಾ ವಾಗ್ದಾಳಿ ನಡೆಸಿದ್ದಾರೆ.

No Comments

Leave A Comment